Thursday , June 21 2018
ಕೇಳ್ರಪ್ಪೋ ಕೇಳಿ
Home / Film News / `ಟಗರು’ ರಿಲೀಸ್ ಡೇಟ್ ಫಿಕ್ಸ್

`ಟಗರು’ ರಿಲೀಸ್ ಡೇಟ್ ಫಿಕ್ಸ್

ಬೆಂಗಳೂರು : ಸೆಂಚುರಿಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ `ಟಗರು’ ಸಿನಿಮಾಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ದುನಿಯಾ ಸೂರಿ ನಿರ್ದೇಶನದ ಈ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಅಲ್ಲದೆ, ಬಿಡುಗಡೆಗೆ ಮುನ್ನವೇ ಬೇರೆ ಭಾಷೆಗಳ ಚಿತ್ರರಂಗವನ್ನು ಸೆಳೆದಿದೆ. ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರು ಕೂಡಾ ಫಸ್ಟ್ ಶೋಗೆ ಸಿನೆಮಾ ನೋಡಲು ಬರುತ್ತಿದ್ದಾರೆ. ಈ ಎಲ್ಲಾ ಕಾರಣದಿಂದ ಸಹಜವಾಗಿಯೇ ನಿರೀಕ್ಷೆಗಳು ಗರಿಗೆದರಿವೆ. ಅಭಿಮಾನಿಗಳೂ ಈ ಚಿತ್ರವನ್ನು ನೋಡಲು ಕಾತರಿಸುತ್ತಿದ್ದಾರೆ. ಅಭಿಮಾನಿಗಳ ಈ ಕಾತರಕ್ಕೆ ಸರಿಯಾಗಿ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 23 ರಂದು ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ `ಟಗರು’ ದರ್ಶನವಾಗಲಿದೆ.

About sudina

Check Also

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಾಗತಿಹಳ್ಳಿ ಚಂದ್ರಶೇಖರ್ ನೇಮಕ

ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ನೂತನ ಸಾರಥಿಯ ನೇಮಕವಾಗಿದೆ. ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. …

Leave a Reply

Your email address will not be published. Required fields are marked *

error: Content is protected !!