Thursday , June 21 2018
ಕೇಳ್ರಪ್ಪೋ ಕೇಳಿ
Home / Film News / ಚಾಲೆಂಜಿಂಗ್ ಸ್ಟಾರ್ ಈಗ ಯಜಮಾನ…

ಚಾಲೆಂಜಿಂಗ್ ಸ್ಟಾರ್ ಈಗ ಯಜಮಾನ…

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ ಈಗ ಯಜಮಾನ. ದರ್ಶನ್ ಅವರ 51ನೇ ಸಿನೆಮಾಕ್ಕೆ ಟೈಟಲ್ ಫೈನಲ್ ಆಗಿದೆ. ಸ್ಯಾಂಡಲ್‍ವುಡ್‍ನಲ್ಲಿ ಇತಿಹಾಸ ನಿರ್ಮಿಸಿದ್ದ ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ ಯಜಮಾನ ಚಿತ್ರದ ಹೆಸರನ್ನೇ ದರ್ಶನ್ ಚಿತ್ರಕ್ಕೂ ಇಡಲಾಗಿದೆ. ಈ ಮೂಲಕ ದರ್ಶನ್ ಅವರ 51ನೇ ಚಿತ್ರದ ಹೆಸರೇನು ಎಂಬ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿ.ಸುರೇಶ್ ಬ್ಯಾನರ್‍ನಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ರಶ್ಮಿಕಾ ಮಂದಣ್ಣ ದರ್ಶನ್‍ಗೆ ನಾಯಕಿಯಾಗಿದ್ದಾರೆ. ಪಿ.ಕುಮಾರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

About sudina

Check Also

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಾಗತಿಹಳ್ಳಿ ಚಂದ್ರಶೇಖರ್ ನೇಮಕ

ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ನೂತನ ಸಾರಥಿಯ ನೇಮಕವಾಗಿದೆ. ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. …

Leave a Reply

Your email address will not be published. Required fields are marked *

error: Content is protected !!