Tuesday , August 14 2018
ಕೇಳ್ರಪ್ಪೋ ಕೇಳಿ
Home / News NOW / ಖುಷಿ ಕೊಟ್ಟಳು ಕಾವೇರಿ : ಕರ್ನಾಟಕಕ್ಕೆ 14.5 ಟಿಎಂಸಿ ಹೆಚ್ಚುವರಿ ನೀರು

ಖುಷಿ ಕೊಟ್ಟಳು ಕಾವೇರಿ : ಕರ್ನಾಟಕಕ್ಕೆ 14.5 ಟಿಎಂಸಿ ಹೆಚ್ಚುವರಿ ನೀರು

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಸಮಾಧಾನ ತರುವಂತಹ ತೀರ್ಪು ಬಂದಿದೆ. ನದಿ ನೀರು ಹಂಚಿಕೆ ಸಂಬಂಧಿಸಿದಂತೆ ಇವತ್ತು ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್ ಕರ್ನಾಟಕಕ್ಕೆ 14.5 ಟಿಎಂಸಿ ಹೆಚ್ಚುವರಿ ನೀರು ಹಂಚಿಕೆ ಮಾಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ, ಅಮಿತಾವ್ ರಾಯ್ ಮತ್ತು ನ್ಯಾ. ಎ ಎಂ ಕಾನ್ವಿಲ್ಕರ್ ಅವರ ತ್ರಿಸದಸ್ಯ ಪೀಠ ಶುಕ್ರವಾರ ಈ ತೀರ್ಪು ನೀಡಿದೆ. ಜೊತೆಗೆ 192 ಟಿಎಂಸಿ ನೀರು ಬಿಡುವ ಬದಲು 177 ಟಿಎಂಸಿ ನೀರು ಬಿಡುವಂತೆ ನ್ಯಾಯಪೀಠ ಆದೇಶ ನೀಡಿದೆ. ಇನ್ನು, ಬೆಂಗಳೂರಿಗೆ ಹೆಚ್ಚುವರಿಯಾಗಿ 4.57 ಟಿಎಂಸಿ ನೀರು ಕುಡಿಯುವುದಕ್ಕೆ ಬಳಸಬಹುದಾಗಿದೆ ಎಂದು ನ್ಯಾಯಾಲಯ ಹೇಳಿದೆ. ಇನ್ನು, ಸಮಾನ ಹಂಚಿಕೆ ತತ್ವ ಪಾಲಿಸುವಂತೆ ನ್ಯಾಯಾಲಯ ಎರಡೂ ರಾಜ್ಯಗಳಿಗೆ ಸೂಚಿಸಿದೆ. 1892 ಹಾಗೂ 1924ರ ಎರಡೂ ಒಪ್ಪಂದಗಳೂ ಸಿಂಧುವಾಗಿದೆ ಎಂದು ಹೇಳಿದ ನ್ಯಾಯಪೀಠ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಕೇಂದ್ರ ಸರ್ಕಾರದ ಕೆಲಸ ಎಂದು ಸ್ಪಷ್ಟವಾಗಿ ತಿಳಿಸಿದೆ. ಜೊತೆಗೆ, ಕಾವೇರಿ ಕೊಳ್ಳದ ಅಚ್ಚುಕಟ್ಟು ಪ್ರದೇಶದ ವಿಸ್ತರಣೆಗೆ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ.

About sudina

Check Also

ಶಾರ್ಜಾ ಏರ್ ಪೋರ್ಟ್‍ನಲ್ಲಿ ಮಹಿಳೆಯರಿಗಾಗಿ ಪಿಂಕ್ ಪಾರ್ಕಿಂಗ್ ಪ್ಲೇಸ್…

ರಾಹುಲ್ ರೋಷನ್ ಸಿಕ್ವೇರಾ, ಗಲ್ಫ್ ಬ್ಯುರೋ ಶಾರ್ಜಾ : ಮಹಿಳೆಯರ ರಕ್ಷಣೆ ಮತ್ತು ಗುಣಮಟ್ಟದ ಸೇವೆ ಒದಗಿಸುವ ಸಲುವಾಗಿ ಶಾರ್ಜಾ …

Leave a Reply

Your email address will not be published. Required fields are marked *

error: Content is protected !!