Saturday , July 21 2018
ಕೇಳ್ರಪ್ಪೋ ಕೇಳಿ
Home / News NOW / ರೈತ ನಾಯಕ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಇನ್ನಿಲ್ಲ

ರೈತ ನಾಯಕ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಇನ್ನಿಲ್ಲ

ಮಂಡ್ಯ : ರೈತ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಪುಟ್ಟಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸರ್ವೋದಯ ಪಕ್ಷದಿಂದ ಶಾಸಕರಾಗಿದ್ದ ಪುಟ್ಟಣ್ಣಯ್ಯ ಜನಪ್ರತಿನಿಧಿಯಾಗಿಯೂ ಗಮನ ಸೆಳೆದಿದ್ದರು.

ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯ ವೀಕ್ಷಿಸುತ್ತಿದ್ದಾಗ ಪುಟ್ಟಣ್ಣಯ್ಯ ಎದೆನೋವಿನಿಂದ ಕುಸಿದು ಬಿದ್ದರು. ತಕ್ಷಣ ಇವರನ್ನು ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯ್ತು. ಆದರೆ, ಚಿಕಿತ್ಸೆ ಫಲಿಸದೆ ಮಿಮ್ಸ್‌ ಆಸ್ಪತ್ರೆಯಲ್ಲೇ ಪುಟ್ಟಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಇನ್ನು, ಪುಟ್ಟಣ್ಣಯ್ಯ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.

About sudina

Check Also

ಸ್ಮಾರ್ಟ್ ಸಿಟಿಗಳ ಅಭಿವೃದ್ಧಿಗೆ ಮುಂದೆ ಬಂದ ನೂರಾರು ಕಂಪೆನಿಗಳು

ಬೆಂಗಳೂರು : ರಾಜ್ಯದ ಹಲವು ನಗರಗಳಿಗೆ ಸ್ಮಾರ್ಟ್ ಸಿಟಿ ಭಾಗ್ಯ ಸಿಕ್ಕಿದೆ. ಇದರಿಂದ ಕೋಟ್ಯಂತರ ರೂಪಾಯಿ ವೆಚ್ಚದ ಯೋಜನೆಗಳು, ಕಾಮಗಾರಿಗಳು …

Leave a Reply

Your email address will not be published. Required fields are marked *

error: Content is protected !!