Sunday , July 22 2018
ಕೇಳ್ರಪ್ಪೋ ಕೇಳಿ
Home / News NOW / ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆ : ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್…!

ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆ : ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್…!

ಬೆಂಗಳೂರು : ಪದೇ ಪದೇ ಗೂಂಡಾಗಿರಿಯಂತಹ ಕೃತ್ಯದಲ್ಲಿ ಪಾಲ್ಗೊಂಡು ಸುದ್ದಿಯಾಗುತ್ತಿರುವ ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಈಗ ಬಂಧಿ. ಮಾಡಿದ ತಪ್ಪಿಗೆ ನಲಪಾಡ್ ಶಿಕ್ಷೆ ಅನುಭವಿಸಬೇಕಾಗಿದೆ. ಈ ನಡುವೆ, ಈ ಪ್ರಕರಣ ಕ್ಷಣಕ್ಷಣಕ್ಕೂ ಟ್ವಿಸ್ಟ್ ಪಡೆದುಕೊಳ್ತಿದೆ. ಶಾಸಕರ ಪುತ್ರನ ರಕ್ಷಣೆಗೆ ಸ್ವತಃ ಪೊಲೀಸರೇ ನಿಂತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿರುವ ಜೊತೆಜೊತೆಗೇ ಇದೀಗ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್ ಮೇಲೂ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

ಯುಬಿ ಸಿಟಿಯಲ್ಲಿ ಈ ಗಲಾಟೆ ನಡೆದಿತ್ತು. ಈ ವೇಳೆ ವಿದ್ವತ್ ಹಾಗೂ ನಲಪಾಡ್ ನಡುವೆ ಜಗಳ ನಡೆದಿತ್ತು. ಈ ಜಗಳದ ಸಂದರ್ಭದಲ್ಲಿ ಅರುಣ್ ಬಾಬು ಎಂಬುವವರ ಮೇಲೆ ವಿದ್ವತ್ ಹಲ್ಲೆ ಮಾಡಿದ್ದಾಗಿ ಅರುಣ್ ಬಾಬು ಎಂಬುವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 36 ಗಂಟೆಗಳ ಬಳಿಕ ಪೊಲೀಸರಿಗೆ ಶರಣಾಗಿರುವ ಮೊಹಮ್ಮದ್ ನಲಪಾಡ್ ಸೇರಿ 7 ಮಂದಿಯನ್ನು ಫೆಬ್ರವರಿ 21ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ನಲಪಾಡ್ ನಿನ್ನೆ ಆಟೋದಲ್ಲಿ ಬಂದು ಪೊಲೀಸರಿಗೆ ಶರಣಾಗಿದ್ದ.

ಮತ್ತೊಂದು ಕಡೆ ಆರೋಪಿ ಮೊಹಮ್ಮದ್ ನಲಪಾಡ್‍ಗೆ ಪೊಲೀಸರು ರಾಜಾತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪ ಕೂಡಾ ಕೇಳಿ ಬರುತ್ತಿದೆ. ನಲಪಾಡ್ ಠಾಣೆಗೆ ಶರಣಾಗಲು ಬಂದ ಸಂದರ್ಭದಲ್ಲೂ ಕೆಲವರು ನಲಪಾಡ್ ಪರ ಘೋಷಣೆ ಕೂಗಿದ್ದರು. ಜೊತೆಗೆ, ಮಾಧ್ಯಮ ಪ್ರತಿನಿಧಿಗಳ ಮೇಲೂ ಹಲ್ಲೆ ನಡೆಸಿದ್ದರು. ಈ ಸಂದರ್ಭದಲ್ಲೂ ಪೊಲೀಸರು ಸುಮ್ಮನಿದ್ದರು.

About sudina

Check Also

ಸ್ಮಾರ್ಟ್ ಸಿಟಿಗಳ ಅಭಿವೃದ್ಧಿಗೆ ಮುಂದೆ ಬಂದ ನೂರಾರು ಕಂಪೆನಿಗಳು

ಬೆಂಗಳೂರು : ರಾಜ್ಯದ ಹಲವು ನಗರಗಳಿಗೆ ಸ್ಮಾರ್ಟ್ ಸಿಟಿ ಭಾಗ್ಯ ಸಿಕ್ಕಿದೆ. ಇದರಿಂದ ಕೋಟ್ಯಂತರ ರೂಪಾಯಿ ವೆಚ್ಚದ ಯೋಜನೆಗಳು, ಕಾಮಗಾರಿಗಳು …

Leave a Reply

Your email address will not be published. Required fields are marked *

error: Content is protected !!