Tuesday , May 22 2018
Home / Film News / ಬಾಲಿವುಡ್ ನಟಿ ರವೀನಾ ಟಂಡನ್ ವಿರುದ್ಧ ಎಫ್‍ಐಆರ್…

ಬಾಲಿವುಡ್ ನಟಿ ರವೀನಾ ಟಂಡನ್ ವಿರುದ್ಧ ಎಫ್‍ಐಆರ್…

ಮುಂಬೈ : ಬಾಲಿವುಡ್ ನಟಿ ರವೀನಾ ಟಂಡನ್ ವಿವಾದಕ್ಕೆ ಸಿಲುಕಿದ್ದಾರೆ. ದೇವಾಲಯದಲ್ಲಿ ಶೂಟಿಂಗ್ ಮಾಡಿದ್ದಾರೆ ಎಂಬ ಕಾರಣಕ್ಕೆ ರವೀನಾ ವಿರುದ್ಧ ದೂರು ದಾಖಲಾಗಿದೆ. ಭುವನೇಶ್ವರದಲ್ಲಿರುವ 11ನೇ ಶತಮಾನದ ಹಳೆಯ ದೇಗುಲದ `ನೋ ಶೂಟಿಂಗ್ ಝೋನ್’ನಲ್ಲಿ ರವೀನಾ ಜಾಹೀರಾತು ಶೂಟಿಂಗ್‍ನಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ದೇಗುಲದ ಆಡಳಿತ ಮಂಡಳಿ ಭುವನೇಶ್ವರ ಪೊಲೀಸರಿಗೆ ದೂರು ನೀಡಿತ್ತು. ಇನ್ನು, ಈ ಬಗ್ಗೆ ಮಾತನಾಡಿರುವ ಭುವನೇಶ್ವರ ಪೊಲೀಸರು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಆಗುವುದಿಲ್ಲ. ಇದೊಂದು ಶಿಕ್ಷಾರ್ಹ ಅಪರಾಧವಲ್ಲ ಎಂದು ಹೇಳಿದ್ದಾರೆ. ರವೀನಾ ಶೂಟಿಂಗ್‍ನಲ್ಲಿ ಪಾಲ್ಗೊಂಡಿದ್ದ ಮೊಬೈಲ್ ವೀಡಿಯೋ ಸಾಮಾಜಿಕ ಜಾಲತಾಣ ಹಾಗೂ ಒಂದಷ್ಟು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದಾದ ಬಳಿಕ ಈ ಪ್ರಕರಣಕ್ಕೆ ವಿವಾದದ ರೂಪ ಬಂದಿತ್ತು..

About sudina

Check Also

ಸ್ಥಳೀಯ ಪ್ರತಿಭೆಗಳಿಗೆ ಇಲ್ಲ ಮನ್ನಣೆ, ನನ್ನ ಪತಿಗೂ ಈ ನೋವಿತ್ತು : ದಿವಂಗತ ಗಾಯಕ ಎಲ್​.ಎನ್.ಶಾಸ್ತ್ರಿ ಪತ್ನಿ ಬೇಸರ

ಬೆಂಗಳೂರು : ಕನ್ನಡ ಸಿನಿಲೋಕದಲ್ಲಿ ಗಾಯಕ ಎಲ್.ಎನ್.ಶಾಸ್ತ್ರಿ ತನ್ನದೇ ಆ ಛಾಪನ್ನು ಮೂಡಿಸಿದ್ದರು. ಹಲವಾರು ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದವರು ಎಲ್.ಎನ್.ಶಾಸ್ತ್ರಿ. …

Leave a Reply

Your email address will not be published. Required fields are marked *

error: Content is protected !!