ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಈಗ `ನಟ ಸಾರ್ವಭೌಮ’ನಾಗಿದ್ದಾರೆ. ಪವನ್ ಒಡೆಯರ್ ನಿರ್ದೇಶಿಸುತ್ತಿರುವ ಹೊಸ ಚಿತ್ರಕ್ಕೆ ಈ ಟೈಟಲ್ ಇಡಲಾಗಿದೆ. ಪವನ್ ಒಡೆಯರ್ ಅವರೇ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಚಿತ್ರದಲ್ಲಿ ಚಿಕ್ಕಣ್ಣ, ರವಿಶಂಕರ್, ಅಚ್ಯುತ ಕುಮಾರ್, ಬಿ ಸರೋಜಾ ದೇವಿ ಸೇರಿದಂತೆ ಪ್ರಮುಖ ಕಲಾವಿದರು ಅಭಿನಯಿಸಲಿದ್ದಾರೆ. ರಚಿತಾ ರಾಮ್ ಪುನೀತ್ ಅವರಿಗೆ ನಾಯಕಿಯಾಗಲಿದ್ದಾರೆ.
ರಾಕ್ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರದ ಫಸ್ಟ್ ಲುಕ್ ಅಪ್ಪು ಬರ್ತ್ಡೇ ಮಾರ್ಚ್ 17 ರಂದು ಬಿಡುಗಡೆಯಾಗಲಿದೆ. ಚಿತ್ರದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಖ್ಯಾತ ಸಾಹಸ ನಿರ್ದೇಶಕ ಪೀಟರ್ ಹೆನ್ ಈ ಚಿತ್ರದ ಸ್ಟಂಟ್ ಡೈರೆಕ್ಟರ್ ಆಗಿ ಚಿತ್ರ ತಂಡ ಸೇರಿಕೊಂಡಿದ್ದಾರೆ.
