Saturday , January 19 2019
ಕೇಳ್ರಪ್ಪೋ ಕೇಳಿ
Home / Film News / ಸ್ಥಳೀಯ ಪ್ರತಿಭೆಗಳಿಗೆ ಇಲ್ಲ ಮನ್ನಣೆ, ನನ್ನ ಪತಿಗೂ ಈ ನೋವಿತ್ತು : ದಿವಂಗತ ಗಾಯಕ ಎಲ್​.ಎನ್.ಶಾಸ್ತ್ರಿ ಪತ್ನಿ ಬೇಸರ

ಸ್ಥಳೀಯ ಪ್ರತಿಭೆಗಳಿಗೆ ಇಲ್ಲ ಮನ್ನಣೆ, ನನ್ನ ಪತಿಗೂ ಈ ನೋವಿತ್ತು : ದಿವಂಗತ ಗಾಯಕ ಎಲ್​.ಎನ್.ಶಾಸ್ತ್ರಿ ಪತ್ನಿ ಬೇಸರ

ಬೆಂಗಳೂರು : ಕನ್ನಡ ಸಿನಿಲೋಕದಲ್ಲಿ ಗಾಯಕ ಎಲ್.ಎನ್.ಶಾಸ್ತ್ರಿ ತನ್ನದೇ ಆ ಛಾಪನ್ನು ಮೂಡಿಸಿದ್ದರು. ಹಲವಾರು ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದವರು ಎಲ್.ಎನ್.ಶಾಸ್ತ್ರಿ. ಆದ್ರೆ, ಇತ್ತೀಚಿಗೆ ಅನಾರೋಗ್ಯದಿಂದ ಇವರು ಕೊನೆಯುಸಿರೆಳೆದಿದ್ದರು. ಇದೀಗ, ಇವರು ಕೊನೆಯದಾಗಿ ಕೆಲಸ ಮಾಡಿದ್ದ ಚಿತ್ರ ‘ಮೇಲೊಬ್ಬ ಮಾಯಾವಿ’ ಚಿತ್ರ ಸಿದ್ಧವಾಗುತ್ತಿದೆ. ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಶಾಸ್ತ್ರಿ ಅವರ ಪತ್ನಿ ಗಾಯಕಿ ಸುಮಾ ಶಾಸ್ತ್ರಿ ಸಿನಿಲೋಕದಲ್ಲಿರುವ ತಾರತಮ್ಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರ ಪ್ರತಿಭೆಗಳಿಗೆ ಇಲ್ಲ ಮನ್ನಣೆ : ನಮ್ಮಲ್ಲಿ ಸ್ಥಳೀಯ ಪ್ರತಿಭಾನ್ವಿತರನ್ನು ಕೆಲವರು ಕೇವಲವಾಗಿ ನೋಡುತ್ತಿದ್ದಾರೆ. ಎಲ್ಲರಿಗೂ ಈ ನೋವಿದೆ. ಹೊರಗಿನವರಿಗೆ ಇಲ್ಲಿ ಹೆಚ್ಚು ಮನ್ನಣೆ ಸಿಗುತ್ತಿದೆ. ಎಲ್.ಎನ್.ಶಾಸ್ತ್ರಿ ಅವರಿಗೂ ಅವಕಾಶ ಸಿಗದೇ ಇರೋ ಬಗ್ಗೆ ಕೊರಗುಗಳು ಇದ್ದವು. ಇದೇ ಕೊರಗಿನಿಂದ ಅವರು ಅನಾರೋಗ್ಯಕ್ಕೀಡಾದರೋ ಗೊತ್ತಿಲ್ಲ ಎಂದೂ ಸುಮಾ ಶಾಸ್ತ್ರಿ ಹೇಳಿಕೊಂಡಿದ್ದಾರೆ. ಅಲ್ಲದೆ, ಶಾಸ್ತ್ರಿ ಅವರ ಕೆಲಸದ ಮೇಲಿನ ಆಸಕ್ತಿಯನ್ನೂ ಸುಮಾ ನೆನಪಿಸಿಕೊಂಡರು. ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದ ಸಂದರ್ಭದಲ್ಲೂ ಬಂದು ‘ಮೇಲೊಬ್ಬ ಮಾಯಾವಿ’ ಚಿತ್ರದ ಕೆಲಸವನ್ನು ಮುಗಿಸಿಕೊಟ್ಟಿದ್ದರು ಎಂದು ಸುಮಾ ಅಂದಿನ ದಿನಗಳನ್ನು ಮೆಲುಕು ಹಾಕಿಕೊಂಡಿದ್ದಾರೆ.

ಪತ್ರಕರ್ತ ನವೀನ್ ಕೃಷ್ಣ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

About sudina

Check Also

ಹಿರಿಯ ನಟ ಲೋಕನಾಥ್ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ವಿಧಿವಶರಾಗಿದ್ದಾರೆ. ಅಂಕಲ್ ಲೋಕನಾಥ್ ಎಂದೇ ಖ್ಯಾತರಾಗಿದ್ದ ಲೋಕನಾಥ್ ವಯೋಸಹಜ ಅನಾರೋಗ್ಯದಿಂದ …

Leave a Reply

Your email address will not be published. Required fields are marked *

error: Content is protected !!