Saturday , January 19 2019
ಕೇಳ್ರಪ್ಪೋ ಕೇಳಿ
Home / News NOW / ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್‍ಗೆ ಹೈಕೋರ್ಟ್ ಜಾಮೀನು

ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್‍ಗೆ ಹೈಕೋರ್ಟ್ ಜಾಮೀನು

ಬೆಂಗಳೂರು : ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ನಡೆದಿದ್ದ ಹೊಡೆದಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಕಾಲ ಜೈಲಿನಲ್ಲಿದ್ದ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್‍ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಉದ್ಯಮಿಯೊಬ್ಬರ ಪುತ್ರ ವಿದ್ವತ್ ಮೇಲೆ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ನಲಪಾಡ್‍ನನ್ನು ಬಂಧಿಸಲಾಗಿತ್ತು. 116 ದಿನಗಳ ಕಾಲ ಜೈಲಿನಲ್ಲಿದ್ದ ಮಹಮ್ಮದ್ ನಲಪಾಡ್‍ಗೆ ಇವತ್ತು 2 ಲಕ್ಷ ಬಾಂಡ್ ಇಬ್ಬರ ಶ್ಯೂರಿಟಿ ಪಡೆದು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ಮತ್ತು ಸಾಕ್ಷ್ಯಾಧಾರಗಳನ್ನು ನಾಶ ಮಾಡಬಾರದು, ಬೆಂಗಳೂರು ಬಿಟ್ಟು ಎಲ್ಲಿಯೂ ತೆರಳದಂತೆಯೂ ನ್ಯಾಯಾಲಯ ಸೂಚನೆ ನೀಡಿದೆ. ನಲಪಾಡ್ ಪರ ಹಿರಿಯ ವಕೀಲ ಬಿ.ವಿ ಆಚಾರ್ಯ ವಾದ ಮಂಡಿಸಿದ್ದು, ಪ್ರಾಸಿಕ್ಯೂಶನ್ ಪರ ವಿಶೇಷ ಅಭಿಯೋಜಕ ಶ್ಯಾಮ್‍ಸುಂದರ್ ವಾದಿಸಿದ್ದಾರೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!