Monday , October 22 2018
ಕೇಳ್ರಪ್ಪೋ ಕೇಳಿ
Home / News NOW / ಎಸ್‍ವಿಎಸ್ : ಸಾಧಕರಿಗೆ ಸನ್ಮಾನ…

ಎಸ್‍ವಿಎಸ್ : ಸಾಧಕರಿಗೆ ಸನ್ಮಾನ…

ಬಂಟ್ವಾಳ : ಯಾವುದೇ ವಿದ್ಯಾಸಂಸ್ಥೆ ಬೆಳೆಯಬೇಕಾದರೆ ಅದಕ್ಕೆ ಸಂಬಂಧಪಟ್ಟ ಎಲ್ಲಾ ಭಾಗಿದಾರರು ಸಂಪೂರ್ಣವಾಗಿ ಸಹಕರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ವಿದ್ಯಾನಿಧಿಯನ್ನು ಸ್ಥಾಪಿಸಿ ಉತ್ತಮವಾದ ಸಹಕಾರವನ್ನು ನೀಡುತ್ತಾ ಬಂದಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಹೇಳಿದ್ದಾರೆ. ಅವರು ಸಂಘದ 2017-18ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ 2016-17ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಎಂ.ಕಾಂ.ನಲ್ಲಿ ಪ್ರಥಮ ರ್ಯಾಂಕ್ ಗಳಿಸಿದ ಝರಿನಾ ಬಾನು ಹಾಗೂ ಬಿ.ಕಾಂ.ನÀಲ್ಲಿ ಪ್ರಥಮ ರ್ಯಾಂಕ್ ಗಳಿಸಿದ ಗಾಯನ ಪ್ರಭು ಇವರನ್ನು ಸನ್ಮಾನಿಸಲಾಯಿತು. ಬಿ.ಎಸ್ಸಿ.ಯಲ್ಲಿ ಹತ್ತನೇ ರ್ಯಾಂಕ್ ಗಳಿಸಿದ ಅನುಷಾರ ಪರವಾಗಿ ಅವರ ತಂದೆ ಆನಂದ್ ಸನ್ಮಾನ ಸ್ವೀಕರಿಸಿದರು. ಇದೇ ವೇಳೆ, 2017-18ರಲ್ಲಿ ನಿವೃತ್ತಿಯನ್ನು ಹೊಂದಿದ ಕಾಲೇಜಿನ ಸಿಬ್ಬಂದಿ ಸುರೇಶ ಕೆ. ಇವರನ್ನೂ ಗೌರವಿಸಲಾಯಿಸಲಾಯಿತು.

ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ವಸಂತ ಪ್ರಭುಗಳು ಪ್ರಾರ್ಥಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶಶಿಕಲಾ ಕೆ. ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಹಾಗೂ ಎಸ್.ಸಿ.ಡಿ.ಸಿಸಿ. ಬ್ಯಾಂಕ್‍ನ ನಿವೃತ್ತ ನಿರ್ದೇಶಕರಾದ ನಾರಾಯಣ ಕಾಮತ್ ವರದಿ ಮಂಡಿಸಿದರು. ಖಚಾಂಚಿ ಶ್ರೀನಿವಾಸ ಪೈ 2017-18ನೇ ಸಾಲಿನ ಲೆಕ್ಕ ಪತ್ರವನ್ನು ಮಂಡಿಸಿದರು. ಸಭೆಯಲ್ಲಿ 2018-19ನೇ ಸಾಲಿನ ಪದಾಧಿಕಾರಿಗಳನ್ನು ಆರಿಸಲಾಯಿತು. ಸಂಘದ ಜೊತೆ ಕಾರ್ಯದರ್ಶಿ ಶ್ರೀಮತಿ ಕವಿತಾರವರು ವಂದಿಸಿದರು. ಸಂಘದ ಉಪಾಧ್ಯಕ್ಷ ಲಕ್ಷೀನಾರಾಯಣ ಮಲ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಸದಸ್ಯರು ಹಾಗೂ ಇತಿಹಾಸ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಭಾರತಿ ಪಿ. ಕಾರ್ಯಕ್ರಮ ನಿರ್ವಹಿಸಿದರು.

ವರದಿ : ಯಾದವ್ ಬಂಟ್ವಾಳ್

About sudina

Check Also

ಮಾಜಿ ಪ್ರೇಯಸಿ ಮೇಲೆ ಸೇಡು : ವೈದ್ಯೆ ಜೊತೆಗಿನ `ಸರಸ’ದ ಫೋಟೋ ಇಂಟರ್‍ನೆಟ್ ನಲ್ಲಿ ಹರಿಬಿಟ್ಟ ಲವರ್…!

ಬೆಂಗಳೂರು : ತನ್ನ ವಿರುದ್ಧ ದೂರು ಕೊಟ್ಟರು ಎಂಬ ಕಾರಣಕ್ಕೆ ಮಾಜಿ ಪ್ರಿಯಕರನೊಬ್ಬ ವೈದ್ಯೆಯೊಂದಿಗಿನ ತನ್ನ ಸರಸದ ಫೋಟೋವನ್ನು ಸಾಮಾಜಿಕ …

Leave a Reply

Your email address will not be published. Required fields are marked *

error: Content is protected !!