Saturday , February 16 2019
ಕೇಳ್ರಪ್ಪೋ ಕೇಳಿ
Home / News NOW / ಬಂಟ್ವಾಳ : ತಾಲೂಕಿನ ವಿವಿಧ ಸುದ್ದಿಗಳ ಒಂದು ನೋಟ

ಬಂಟ್ವಾಳ : ತಾಲೂಕಿನ ವಿವಿಧ ಸುದ್ದಿಗಳ ಒಂದು ನೋಟ

ಸಾಂಧರ್ಬಿಕ ಚಿತ್ರ

ರೈಲಿನಡಿಗೆ ಬಿದ್ದು ಸಾವು : ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಅಮೆಮಾರ್ ಎಂಬಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಅಮೆಮಾರಿನ ನಿವಾಸಿ ಫಾರೂಕ್(45) ಎಂದು ಗುರುತಿಸಲಾಗಿದೆ. ಫಾರೂಕ್ ಮಂಗಳೂರು ಬಂದರಿನ ಧಕ್ಕೆಯಲ್ಲಿ ಉದ್ಯೋಗಿಯಾಗಿದ್ದು, ಮುಂಜಾನೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಹಳಿ ದಾಟುತ್ತಿದ್ದ ವೇಳೆ ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಬಳಿಕ ಇದೇ ದಾರಿಯಲ್ಲಿ ಹೋಗುವವರು ಇವರನ್ನು ಕಂಡು ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಬಂಧುಬಳಗವನ್ನು ಅಗಲಿದ್ದಾರೆ.

       *******************
ನೂತನ ಶಾಸಕರ ಕಚೇರಿ ಉದ್ಘಾಟನೆ : ಬಿ.ಸಿ.ರೋಡಿನ ತಾ.ಪಂ. ಕಚೇರಿ ಕಟ್ಟಡದ ಬಳಿ ಇರುವ ಸಾಮಥ್ರ್ಯ ಸೌಧದಲ್ಲಿ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರ ಅಧಿಕೃತ ಕಚೇರಿ ಶುಕ್ರವಾರ ಬೆಳಿಗ್ಗೆ ವಿವಿಧ ವೈಧಿಕ ವಿಧಿವಿಧಾನದೊಂದಿಗೆ ಕಾರ್ಯಾರಂಭಗೊಂಡಿತು. ಬಿಜೆಪಿಯ ಹಿರಿಯ ಮುಖಂಡ ಉದಯಕುಮಾರ್ ರಾವ್ ಬಂಟ್ವಾಳ ಕಚೇರಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ ಸೇರಿದಂತೆ ಹಲವರು ನಾಯಕರು ಉಪಸ್ಥಿತರಿದ್ದರು.

*******************
ಪಟ್ಟಾಭಿಷೇಕ ದಶಮಾನೋತ್ಸವಕ್ಕೆ ಆಹ್ವಾನ : ಧರ್ಮಸ್ಥಳ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದಲ್ಲಿ ಸೆ.3 ರಂದು ನಡೆಯಲಿರುವ ಇಲ್ಲಿನ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಮತ್ತು ರಾಷ್ಟ್ರೀಯ ಧರ್ಮ ಸಂಸದ್ ಕಾರ್ಯಕ್ರಮಕ್ಕೆ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳನ್ನು ಶುಕ್ರವಾರ ಅವರ ಮಠಕ್ಕೆ ತೆರಳಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಹ್ವಾನಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಟ್ರಸ್ಟಿಗಳಾದ ಚಿತ್ತರಂಜನ್ ಗರೋಡಿ ಮೋಹನ್ ಉಜ್ಜೋಡಿ, ಜಿಲ್ಲಾ ಸಂಚಾಲಕರಾದ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ , ಬಂಟ್ವಾಳ ಶ್ರೀರಾಮ ಕ್ಷೇತ್ರ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಸಂಘಟನಾ ಕಾರ್ಯದರ್ಶಿಗಳಾದ ಕೃಷ್ಣಪ್ಪ ಗುಡಿಗಾರ್, ರವಿ ಪೂಜಾರಿ ಉಪಸ್ಥಿತರಿದ್ದರು.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!