Sunday , July 22 2018
ಕೇಳ್ರಪ್ಪೋ ಕೇಳಿ
Home / Film News / `ನಾಗರಹಾವು’ ಚಿತ್ರಕ್ಕೆ ಹೊಸ ರೂಪ : ಟೀಸರ್ ರಿಲೀಸ್

`ನಾಗರಹಾವು’ ಚಿತ್ರಕ್ಕೆ ಹೊಸ ರೂಪ : ಟೀಸರ್ ರಿಲೀಸ್

ಬೆಂಗಳೂರು : ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಮೊದಲ ಚಿತ್ರ `ನಾಗರಹಾವು’ ಹೊಸ ರೂಪದೊಂದಿಗೆ ರಿಲೀಸ್‍ಗೆ ತಯಾರಾಗುತ್ತಿದೆ. ಈಗ ಹೊಸ ಅವತರಣಿಕೆ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ನಡುವೆ, ಚಿತ್ರದ ಟೀಸರ್ ರಿಲೀಸ್ ಆಗಿದ್ದು ಪ್ರೇಕ್ಷಕರ ಕಾತರವನ್ನು ಇನ್ನಷ್ಟು ಇಮ್ಮಡಿಯಾಗಿದೆ. ಹೊಸ ತಂತ್ರಜ್ಞಾನದಲ್ಲಿ ಸಿದ್ಧವಾಗಿರುವ ಈ ಚಿತ್ರದ ಟೀಸರ್ ಅನ್ನು ಕಿಚ್ಚ ಸುದೀಪ್ ರಿಲೀಸ್ ಮಾಡಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಂದೆ ವೀರಸ್ವಾಮಿ ಅವರು ಈಶ್ವರಿ ಪ್ರೊಡಕ್ಷನ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದರು. ಇದೀಗ ರವಿ ಅವರ ಸಹೋದರ ಬಾಲಾಜಿ ನಾಗರಹಾವು ಚಿತ್ರಕ್ಕೆ ಹೊಸ ರೂಪಕೊಟ್ಟು ಬಿಡುಗಡೆಗೆ ತಯಾರಾಗುತ್ತಿದ್ದಾರೆ. ಆದರೆ, ಯಾವಾಗ ಚಿತ್ರ ಬಿಡುಗಡೆ ಎಂಬ ಗುಟ್ಟನ್ನು ಬಾಲಾಜಿ ಬಿಟ್ಟುಕೊಟ್ಟಿಲ್ಲ.

About sudina

Check Also

ಮೆಟ್ರೋದಲ್ಲಿ ಅನುಪಮ್ ಖೇರ್ ಸಂಚಾರ : ಅಭಿಮಾನಿಗಳಿಗೆ ಶಾಕ್…!

ಮುಂಬೈ : ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಮುಂಬೈ ಮೆಟ್ರೋದಲ್ಲಿ ಸಂಚರಿಸಿದ್ದಾರೆ. ಪ್ರಯಾಣಿಕರೊಂದಿಗೆ ಬೆರೆತು ಒಂದಷ್ಟು ಕಾಲ ಕಳೆದ …

Leave a Reply

Your email address will not be published. Required fields are marked *

error: Content is protected !!