Saturday , February 16 2019
ಕೇಳ್ರಪ್ಪೋ ಕೇಳಿ
Home / News NOW / ರಾಷ್ಟ್ರೀಯ ಧರ್ಮ ಸಂಸದ್‍ಗೆ ಸ್ವಾಮೀಜಿಗಳಿಗೆ ಆಹ್ವಾನ…

ರಾಷ್ಟ್ರೀಯ ಧರ್ಮ ಸಂಸದ್‍ಗೆ ಸ್ವಾಮೀಜಿಗಳಿಗೆ ಆಹ್ವಾನ…

ಬಂಟ್ವಾಳ : ಧರ್ಮಸ್ಥಳ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದಲ್ಲಿ ಸೆ.3 ರಂದು ನಡೆಯಲಿರುವ ಇಲ್ಲಿನ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವದ ಸಿದ್ಧತೆಗಳು ಬಹಳ ಜೋರಾಗಿ ನಡೆಯುತ್ತಿದೆ. ಈ ದಶಮಾನೋತ್ಸವ ಮತ್ತು ರಾಷ್ಟ್ರೀಯ ಧರ್ಮ ಸಂಸದ್‍ಗೆ ವಿವಿಧ ಮಠಾಧೀಶರನ್ನು ಆಹ್ವಾನಿಸಲಾಗುತ್ತಿದೆ.

ಕರಿಂಜೆ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ, ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ವಿಠಲದಾಸ ಸ್ವಾಮೀಜಿ, ಶ್ರೀ ರಾಮಕೃಷ್ಣ ತಪೋವನದ ವಿವೇಕ ಚೈತನ್ಯ ಸ್ವಾಮೀಜಿ, ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಮಂಗಳೂರು ರಾಮಕೃಷ್ಣ ಮಿಷನ್ನಿನ ಶ್ರೀ ಜಿತಕಾಮಾನಂದ ಸ್ವಾಮೀಜಿ, ಕುಂಪಲ ಶ್ರೀ ಕೃಷ್ಣ ಮುಖ್ಯಪ್ರಾಣ ದೇವಸ್ಥಾನದ ಬಾಲಯೋಗಿ ಅಮೃತಾನಂದ, ಗುರುಪುರ ವಜ್ರದೇಹಿ ಮಠ, ಕದ್ರಿ ಯೋಗೀಶ್ವರ ಮಠ, ಮರಕಡ ಶ್ರೀ ಗುರು ಪರಾಶಕ್ತಿ ಕ್ಷೇತ್ರಕ್ಕೆ ಭೇಟಿ ನೀಡಿ ಆಹ್ವಾನ ನೀಡಲಾಯಿತು. ಕ್ಷೇತ್ರದ ಟ್ರಸ್ಟಿಗಳಾದ ಚಿತ್ತರಂಜನ್ ಗರೋಡಿ ಮೋಹನ್ ಉಜ್ಜೋಡಿ, ಧರ್ಮ ಸಂಸದ್ ಸಮಿತಿಯ ಸಂಚಾಲಕ ಸತ್ಯಜಿತ್ ಸುರತ್ಕಲ್, ಜಿಲ್ಲಾ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಕೃಷ್ಣಪ್ಪ ಗುಡಿಗಾರ್, ಲೋಹಿತ್ ಹಾಜರಿದ್ದರು.

ಇನ್ನು, ಮಾಣಿಲ ಶ್ರೀಧಾಮ ಶ್ರೀ ಮೋಹನದಾಸ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಗುರುದೇವಾನಂದ ಸ್ವಾಮೀಜಿ, ಬಾಳೆಕೋಡಿ ಶ್ರೀ ಕಾಶಿಕಾಳಭೈರವೇಶ್ವರ ಶಿಲಾಂಜನ ಕ್ಷೇತ್ರದ ಶ್ರೀ ಶಶಿಕಾಂತಮಣಿ ಸ್ವಾಮೀಜಿ, ಕಾಣಿಯೂರು ಶ್ರೀ ಚಾಮುಂಡೇಶ್ವರೀ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸ್ವಾಮೀಜಿ, ಎಡನೀರು ಮಠದ ಶ್ರೀ ಕೇಶಾವನಂದ ಭಾರತಿ ಮಹಾಸ್ವಾಮಿ ಸೇರಿದಂತೆ ಹಲವು ಮಠಾಧೀಶರಿಗೆ ಆಹ್ವಾನ ನೀಡಲಾಗಿದೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!