Sunday , July 22 2018
ಕೇಳ್ರಪ್ಪೋ ಕೇಳಿ
Home / Film News / ವಿಮಾನದಲ್ಲೇ ಭಾರತೀಯ ನಟನಿಗೆ ಹೃದಯಾಘಾತ…! : ಓಮನ್ ನಲ್ಲಿ ವಿಮಾನ ತುರ್ತು ಭೂಸ್ಪರ್ಶ…

ವಿಮಾನದಲ್ಲೇ ಭಾರತೀಯ ನಟನಿಗೆ ಹೃದಯಾಘಾತ…! : ಓಮನ್ ನಲ್ಲಿ ವಿಮಾನ ತುರ್ತು ಭೂಸ್ಪರ್ಶ…

ಒಮನ್ : ಮಲಯಾಲಂನ ಖ್ಯಾನ ನಟ ಕ್ಯಾಪ್ಟನ್ ರಾಜು ಹೃದಯಾಘಾತಕ್ಕೀಡಾಗಿದ್ದಾರೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಇವರಿಗೆ ಹೃದಯಾಘಾತವಾಗಿದ್ದು, ತಕ್ಷಣ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಜೊತೆಗೆ, ಇವರನ್ನು ಓಮನ್​ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜು ಅಮೇರಿಕಾಕ್ಕೆ ಹೋಗುತ್ತಿದ್ದರು. ಈ ವೇಳೆ, ಈ ಘಟನೆ ನಡೆದಿದೆ. ಸದ್ಯ ಇವರನ್ನು ಕಿಮ್ಸ್ ಓಮನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಇವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ.

ರಾಜು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಮಲಯಾಳಂ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ, ಕನ್ನಡದಲ್ಲೂ ಇವರು ನಟಿಸಿ ಗಮನ ಸೆಳೆದಿದ್ದಾರೆ. ಸೇನೆಯಲ್ಲೂ ಇವರು ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸಿದ್ದರು.

About sudina

Check Also

ಮೆಟ್ರೋದಲ್ಲಿ ಅನುಪಮ್ ಖೇರ್ ಸಂಚಾರ : ಅಭಿಮಾನಿಗಳಿಗೆ ಶಾಕ್…!

ಮುಂಬೈ : ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಮುಂಬೈ ಮೆಟ್ರೋದಲ್ಲಿ ಸಂಚರಿಸಿದ್ದಾರೆ. ಪ್ರಯಾಣಿಕರೊಂದಿಗೆ ಬೆರೆತು ಒಂದಷ್ಟು ಕಾಲ ಕಳೆದ …

Leave a Reply

Your email address will not be published. Required fields are marked *

error: Content is protected !!