Saturday , February 16 2019
ಕೇಳ್ರಪ್ಪೋ ಕೇಳಿ
Home / News NOW / ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು

ಮಡಿಕೇರಿ : ವಿದ್ಯುತ್ ತಂತಿ ಸ್ಪರ್ಶಿಸಿ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದಲ್ಲಿ ನಡೆದಿದೆ. ಚೆಟ್ಟಿಮಾನಿಯ ಪೂವ(65) ಮೃತ ಕೂಲಿ ಕಾರ್ಮಿಕ. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೆದಂಬಾಡಿ ರಮೇಶ್ ಎಂಬುವವರ ತೋಟದಲ್ಲಿ ಚೆಟ್ಟಿಮಾನಿಯ ಪೂವ ಕೆಲಸ ಮಾಡುತ್ತಿದ್ದರು. ಈ ತೋಟದ ಮೂಲಕ 11 ಕೆವಿ ವಿದ್ಯುತ್ ಲೈನ್ ಹಾದು ಹೋಗಿತ್ತು. ಕೆಲಸದ ವೇಳೆ ಸಿಲ್ವರ್ ಏಣಿಯನ್ನು ಸ್ಥಳಾಂತರಿಸುವಾಗ ತಂತಿಗೆ ಏಣಿ ಸ್ಪರ್ಶಿಸಿದೆ. ಹೀಗಾಗಿ, ತಕ್ಷಣ ವಿದ್ಯುತ್ ಪ್ರವಹಿಸಿ ಇವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!