Saturday , February 16 2019
ಕೇಳ್ರಪ್ಪೋ ಕೇಳಿ
Home / News NOW / ಕೊಡಗಿನಲ್ಲಿ ಆನೆ ಮನುಷ್ಯನ ಸಂಘರ್ಷ…

ಕೊಡಗಿನಲ್ಲಿ ಆನೆ ಮನುಷ್ಯನ ಸಂಘರ್ಷ…

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆನೆ ಮತ್ತು ಮನುಷ್ಯನ ನಡುವಣ ಸಂಘರ್ಷ ಮುಂದುವರಿದಿದೆ. ಹೀಗಾಗಿ, ಕಾಡಂಚಿನ ಗ್ರಾಮದ ಜನ ಭಯಭೀತರಾಗಿದ್ದಾರೆ. ಮೊನ್ನೆ ವಿರಾಜೆಪೇಟೆ ತಾಲೂಕಿನ ಮಾಯಮುಡಿ ಗ್ರಾಮದ ಪ್ರೇಮಾ ಎಂಬ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿತ್ತು. ಈ ದಾಳಿಯಿಂದ ಪ್ರೇಮ ತೀವ್ರವಾಗಿ ಗಾಯಗೊಂಡಿದ್ದರು. 

ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಒಂಟಿ ಸಲಗ ಪ್ರೇಮಾ ಮೇಲೆ ದಾಳಿ ಮಾಡಿತ್ತು. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಪ್ರೇಮಾ ಇದರಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು. ಕೆಲಸಕ್ಕೆ ಮನೆಯಿಂದ ಹೊರಗೆ ಹೋಗಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇನ್ನು, ತೀವ್ರ ಗಾಯಗೊಂಡು ಸಂಕಷ್ಟದಲ್ಲಿರುವ ಪ್ರೇಮಾ ಅವರಿಗೆ ಕೊಡಗು ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ 10 ಸಾವಿರ ಆರ್ಥಿಕ ನೆರವು ನೀಡಿದ್ದಾರೆ. ಜೊತೆಗೆ, ಇಲ್ಲಿ ನಿರಂತರ ಆನೆಗಳ ಸಮಸ್ಯೆ ಎದುರಾಗುತ್ತಿದ್ದು, ಇದಕ್ಕೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜನ ಕೂಡಾ ಒತ್ತಾಯಿಸುತ್ತಿದ್ದಾರೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!