Friday , September 21 2018
ಕೇಳ್ರಪ್ಪೋ ಕೇಳಿ
Home / Film News / ಮಳೆಯಲ್ಲಿ ನೆನೆದು ಹರಿಪ್ರಿಯಾ ಖುಷಿ…

ಮಳೆಯಲ್ಲಿ ನೆನೆದು ಹರಿಪ್ರಿಯಾ ಖುಷಿ…

ಬೆಂಗಳೂರು : ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ಈಗಷ್ಟೇ ತಮ್ಮ `ಡಾಟರ್ ಆಫ್ ಪಾರ್ವತಮ್ಮ’ ಚಿತ್ರವನ್ನು ಮುಗಿಸಿದ್ದಾರೆ. ಹೀಗಾಗಿ, ಈ ಬ್ಯುಸಿ ಲೈಫ್‍ನ ನಡುವೆ ಸಣ್ಣ ಬ್ರೇಕ್ ತೆಗೆದುಕೊಂಡ ಹರಿಪ್ರಿಯಾ ಒಂದಷ್ಟು ಹೊತ್ತು ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ. ಅದೂ ಅಲ್ಲದೆ, ಸಿಟಿ ಜಂಜಾಟದಿಂದ ದೂರವಾಗಿ ಸ್ವಚ್ಛಂದ ಹಸಿರ ವಾತಾವರಣದಲ್ಲಿ ವಿಹರಿಸುತ್ತಿದ್ದಾರೆ. ಇವರ ಈ ಖುಷಿಗೆ ಮಳೆಯೂ ಜೊತೆಯಾಗಿದೆ. ಈ ಮಳೆಯಲ್ಲಿ ನೆನೆಯುತ್ತಾ ಹರಿಪ್ರಿಯಾ ಕುಣಿದಾಡಿದ್ದು, ಈ ವೀಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ.

`ಡಾಟರ್ ಆಫ್ ಪಾರ್ವತಮ್ಮ’ ಚಿತ್ರವನ್ನು ಜೆ ಶಂಕರ್ ನಿರ್ದೇಶನ ಮಾಡುತ್ತಿದ್ದು, ಇದರಲ್ಲಿ ಹರಿಪ್ರಿಯಾ ತನಿಖಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಸುಮಲತಾ ಹರಿಪ್ರಿಯಾ ಅಮ್ಮನ ಮಾತ್ರವನ್ನು ಮಾಡಿದ್ದಾರೆ.

About sudina

Check Also

ರಾಷ್ಟ್ರಗೀತೆ ಹಾಡುವಾಗ ಭಾವುಕರಾದ ಐಶ್ವರ್ಯ : ಯಾಕೆ ಗೊತ್ತಾ…? : ಇಲ್ಲಿದೆ ವೀಡಿಯೋ..

ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ಬಚ್ಚನ್ ಮುಂಬೈಯಲ್ಲಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುವಾಗ ಭಾವುಕರಾಗಿದ್ದಾರೆ. ಶಬಾನಾ ಅಜ್ಮಿ, ಜೂಹಿ ಚಾವ್ಲಾ …

Leave a Reply

Your email address will not be published. Required fields are marked *

error: Content is protected !!