Friday , September 21 2018
ಕೇಳ್ರಪ್ಪೋ ಕೇಳಿ
Home / Film News / ಸ್ಯಾಂಡಲ್‍ವುಡ್‍ಗೆ ಬರುತ್ತಿದ್ದಾರೆ ವಿವೇಕ್ ಒಬೇರಾಯ್

ಸ್ಯಾಂಡಲ್‍ವುಡ್‍ಗೆ ಬರುತ್ತಿದ್ದಾರೆ ವಿವೇಕ್ ಒಬೇರಾಯ್

ಬೆಂಗಳೂರು : ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಈಗ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಅದರಲ್ಲಿ `ರುಸ್ತುಂ’ ಕೂಡಾ ಒಂದು. ಸಾಹಸ ನಿರ್ದೇಶಕ ರವಿವರ್ಮಾ ಈ ಚಿತ್ರವನ್ನು ಡೈರೆಕ್ಟ್ ಮಾಡುತ್ತಿದ್ದಾರೆ. ಹಲವು ನಟರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ತಮಿಳು, ತೆಲುಗಿನಲ್ಲಿ ಹೆಸರು ಮಾಡಿರುವ ಹರೀಶ್ ಉತ್ತಮ್ ಕೂಡಾ ಅಭಿನಯಿಸುತ್ತಿದ್ದಾರೆ.

ಇದರ ನಡುವೆ ಬಾಲಿವುಡ್ ನಟ ವಿವೇಕ್ ಒಬೇರಾಯ್ ಅವರನ್ನೂ ಈ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಕರೆತರಲು ರವಿವರ್ಮ ನಿರ್ಧರಿಸಿದ್ದಾರೆ. ಹೀಗಾಗಿ, ಶಿವಣ್ಣ ಸೇರಿದಂತೆ ಮಲ್ಟಿ ಸ್ಟಾರ್‍ಗಳಿರುವ ಈ ಚಿತ್ರದ ಮೇಲೆ ಸಹಜವಾಗಿಯೇ ನಿರೀಕ್ಷೆಗಳು ಗರಿಗೆದರಿವೆ. ಈ ಬಗ್ಗೆ ಮಾತುಕತೆಗಳು ನಡೆದಿದ್ದು, ವಿವೇಕ್ ಕೂಡಾ ಈ ಚಿತ್ರದಲ್ಲಿ ನಟಿಸಲು ಸಮ್ಮತಿಸಿದ್ದಾರೆ ಎಂದು ಹೇಳಲಾಗುತ್ತಿದೆ.

About sudina

Check Also

ರಾಷ್ಟ್ರಗೀತೆ ಹಾಡುವಾಗ ಭಾವುಕರಾದ ಐಶ್ವರ್ಯ : ಯಾಕೆ ಗೊತ್ತಾ…? : ಇಲ್ಲಿದೆ ವೀಡಿಯೋ..

ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ಬಚ್ಚನ್ ಮುಂಬೈಯಲ್ಲಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುವಾಗ ಭಾವುಕರಾಗಿದ್ದಾರೆ. ಶಬಾನಾ ಅಜ್ಮಿ, ಜೂಹಿ ಚಾವ್ಲಾ …

Leave a Reply

Your email address will not be published. Required fields are marked *

error: Content is protected !!