Monday , July 23 2018
ಕೇಳ್ರಪ್ಪೋ ಕೇಳಿ
Home / News NOW / ಕೊಡಗಿನಲ್ಲಿ ಇನ್ನೂ ತಗ್ಗದ ಮಳೆಯ ಅಬ್ಬರ

ಕೊಡಗಿನಲ್ಲಿ ಇನ್ನೂ ತಗ್ಗದ ಮಳೆಯ ಅಬ್ಬರ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇನ್ನೂ ತಗ್ಗಿಲ್ಲ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ನದಿ ಪಾತ್ರದ ಗ್ರಾಮಗಳು ಪ್ರವಾಹದ ಭೀತಿ ಎದುರಿಸುತ್ತಿವೆ. ಹೀಗಾಗಿ, ಜಿಲ್ಲಾಧಿಕಾರಿ ಶ್ರೀವಿದ್ಯಾ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯ ಅರ್ಭಟದಿಂದ ಕರಡಿಗೋಡು ಗ್ರಾಮ ಸಂಪೂರ್ಣ ಜಲಾವೃತ್ತವಾಗಿದ್ದು ಜನರು ಸಂಕಷ್ಟ ಎದುರಿಸುತ್ತಿದ್ದಾರೆ.



ಕಾವೇರಿ ನದಿ ಅಂಚಿನಲ್ಲಿರುವ ಈ ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ನೆಲೆಸಿದ್ದಾರೆ. ಅವರೆಗುಂದ ಹಾಗೂ ಮಾಲ್ದಾರೆ ಗ್ರಾಮಕ್ಕೆ ರಸ್ತೆ ಸಂಪರ್ಕ ಕೂಡಾ ಇದೇ ಮಾರ್ಗದಲ್ಲಿದೆ. ಪ್ರತಿವರ್ಷ ಮಳೆಯಾದಾಗಲೂ ಇಲ್ಲಿನ ಜನ ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ, ನಮಗೊಂದು ಶಾಶ್ವತ ಪರಿಹಾರ ಕಲ್ಪಿಸಿ ಕೊಡಿ ಎಂದು ಜನ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

About sudina

Check Also

ಸ್ಮಾರ್ಟ್ ಸಿಟಿಗಳ ಅಭಿವೃದ್ಧಿಗೆ ಮುಂದೆ ಬಂದ ನೂರಾರು ಕಂಪೆನಿಗಳು

ಬೆಂಗಳೂರು : ರಾಜ್ಯದ ಹಲವು ನಗರಗಳಿಗೆ ಸ್ಮಾರ್ಟ್ ಸಿಟಿ ಭಾಗ್ಯ ಸಿಕ್ಕಿದೆ. ಇದರಿಂದ ಕೋಟ್ಯಂತರ ರೂಪಾಯಿ ವೆಚ್ಚದ ಯೋಜನೆಗಳು, ಕಾಮಗಾರಿಗಳು …

Leave a Reply

Your email address will not be published. Required fields are marked *

error: Content is protected !!