Monday , July 23 2018
ಕೇಳ್ರಪ್ಪೋ ಕೇಳಿ
Home / News NOW / ಮಂಗಳೂರಿನಿಂದ ಬೆಂಗಳೂರಿನ ಮೆಜೆಸ್ಟಿಕ್‍ಗೆ ಬಂದ ಮಹಿಳೆಯ ಅತ್ಯಾಚಾರಕ್ಕೆ ಯತ್ನ…!

ಮಂಗಳೂರಿನಿಂದ ಬೆಂಗಳೂರಿನ ಮೆಜೆಸ್ಟಿಕ್‍ಗೆ ಬಂದ ಮಹಿಳೆಯ ಅತ್ಯಾಚಾರಕ್ಕೆ ಯತ್ನ…!

ಬೆಂಗಳೂರು : ರಾಜಧಾನಿಯಲ್ಲಿ ಪದೇ ಪದೇ ಅತ್ಯಾಚಾರದಂತಹ ಪ್ರಕರಣಗಳೂ ಮರುಕಳಿಸುತ್ತಲೇ ಇದೆ. ಬೆಂಗಳೂರಿನಲ್ಲಿ ಹೆಣ್ಮಕ್ಕಳು ಎಷ್ಟು ಸೇಫ್ ಎಂಬ ಪ್ರಶ್ನೆ ಸದಾ ಕೇಳಿ ಬರುತ್ತಲೇ ಇರುತ್ತದೆ. ಇದೀಗ ಮತ್ತೆ ಇಂತಹದ್ದೇ ಕಿರುಕುಳದಂತಹ ಪ್ರಕರಣ ವರದಿಯಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಬಂದು ರಾತ್ರಿ ಮೆಜೆಸ್ಟಿಕ್‍ನಲ್ಲಿ ಇಳಿದಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಬಂದ ಇಬ್ಬರು ಕಾಡಿದ್ದಾರೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸೋಮವಾರ ಈ ಘಟನೆ ನಡೆದಿದೆ. ಮಂಗಳೂರಿನಿಂದ ಈ ಮಹಿಳೆ ಬಸ್‍ನಲ್ಲಿ ಬೆಂಗಳೂರಿಗೆ ತಲುಪುವಾಗ ರಾತ್ರಿ ಸುಮಾರು 11 ಗಂಟೆ ಆಗಿತ್ತು. ಇಲ್ಲಿ ಹೊಸಕೋಟೆಗೆ ತೆರಳಲು ಬೇರೆ ಬಸ್‍ಗೆ ಕಾಯುತ್ತಿದ್ದಾಗ ಬೈಕ್‍ನಲ್ಲಿ ಬಂದ ಇಬ್ಬರು ಕಿರುಕುಳ ಕೊಟ್ಟಿದ್ದಾರೆ. ಈ ವೇಳೆ, ಇವರಿಂದ ತಪ್ಪಿಸಿಕೊಳ್ಳಲು ಮಹಿಳೆ ರಸ್ತೆ ದಾಟಿ ರೈಲ್ವೇ ನಿಲ್ದಾಣದ ಕಡೆಗೆ ಹೋಗುವಾಗ ಮತ್ತೆ ಬಂದ ಈ ಇಬ್ಬರು ಇವರ ಬಾಯಿ ಮುಚ್ಚಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ವೇಳೆ, ಮಹಿಳೆ ಜೋರಾಗಿ ಕಿರುಚಾಡಿದ್ದರಿಂದ ಹೆದರಿದ ಈ ಇಬ್ಬರು ಇವರನ್ನು ಅಲ್ಲೇ ಬಿಟ್ಟು ಬೈಕ್‍ನಲ್ಲಿ ಪರಾರಿಯಾಗಿದ್ದಾರೆ. ತಕ್ಷಣ ಬೈಕ್‍ನ ನಂಬರ್ ಅನ್ನು ಇವರು ನೋಡಿ ನೆನಪಿಟ್ಟುಕೊಂಡಿದ್ದಾರೆ. ಜೊತೆಗೆ, ಅನ್ನಪೂಣೇಶ್ವರಿ ನಗರ ಪೊಲೀಸ್ ಠಾಣೆಗೆ ಬಂದು ದೂರು ಕೊಟ್ಟಿದ್ದಾರೆ. ಬೈಕ್‍ನ ನಂಬರ್ ಕೂಡಾ ಪೊಲೀಸರಿಗೆ ತಿಳಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

About sudina

Check Also

ಸ್ಮಾರ್ಟ್ ಸಿಟಿಗಳ ಅಭಿವೃದ್ಧಿಗೆ ಮುಂದೆ ಬಂದ ನೂರಾರು ಕಂಪೆನಿಗಳು

ಬೆಂಗಳೂರು : ರಾಜ್ಯದ ಹಲವು ನಗರಗಳಿಗೆ ಸ್ಮಾರ್ಟ್ ಸಿಟಿ ಭಾಗ್ಯ ಸಿಕ್ಕಿದೆ. ಇದರಿಂದ ಕೋಟ್ಯಂತರ ರೂಪಾಯಿ ವೆಚ್ಚದ ಯೋಜನೆಗಳು, ಕಾಮಗಾರಿಗಳು …

Leave a Reply

Your email address will not be published. Required fields are marked *

error: Content is protected !!