Sunday , December 16 2018
ಕೇಳ್ರಪ್ಪೋ ಕೇಳಿ
Home / News NOW / ಮೈಸೂರು ಹಾಸ್ಟೆಲ್‍ಗೆ ನುಗ್ಗಿ ಕಾಟ : ಬಂಟ್ವಾಳದಲ್ಲಿ ಆರೋಪಿ ಬಂಧನ

ಮೈಸೂರು ಹಾಸ್ಟೆಲ್‍ಗೆ ನುಗ್ಗಿ ಕಾಟ : ಬಂಟ್ವಾಳದಲ್ಲಿ ಆರೋಪಿ ಬಂಧನ

ಮಂಗಳೂರು : ಜುಲೈ 20 ರಂದು ಮೈಸೂರಿನ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಆರ್.ಆಸ್ಪತ್ರೆ ಆವರಣದಲ್ಲಿದ್ದ ವಿದ್ಯಾರ್ಥಿನಿಯರ ಹಾಸ್ಟೆಲ್‍ಗೆ ನುಗ್ಗಿ ಕಾಟ ಕೊಟ್ಟಿದ್ದ ಆರೋಪಿ ಕೊನೆಗೂ ಸೆರೆಯಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿ ಸೆರೆ ಸಿಕ್ಕಿದ್ದಾನೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ಮಣಿ ನಾಲ್ಕೂರು ಗ್ರಾಮದ ನಿವಾಸಿ ಮಹಮ್ಮದ್ ಅಲ್ತಾಫ್ ಎಂದು ಗುರುತಿಸಲಾಗಿದೆ.

ಆರೋಪಿ ಜುಲೈ 20 ರಂದು ಮಧ್ಯರಾತ್ರಿ ಹಾಸ್ಟೆಲ್‍ಗೆ ನುಗ್ಗಿ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟಿದ್ದ. ಇದರಿಂದ ಭಯಭೀತರಾಗಿದ್ದ ವಿದ್ಯಾರ್ಥಿನಿಯರು ಪ್ರತಿಭಟನೆ ಮಾಡಿದ್ದರು. ಜೊತೆಗೆ, ಆರೋಪಿ ಬಂಧನಕ್ಕೆ ಮೈಸೂರಿನಲ್ಲೂ ದೊಡ್ಡ ಮಟ್ಟದ ಪ್ರತಿಭಟನೆಯೂ ನಡೆದಿತ್ತು. ಈ ಸಂಬಂಧ ಕಾರ್ಯಪ್ರವೃತ್ತರಾದ ಪೊಲೀಸರು ವಿವಿಧ ಠಾಣೆಗಳಿಗೆ ಮಾಹಿತಿ ಕೊಟ್ಟಿದ್ದರು. ಈ ಮಾಹಿತಿಯ ಆಧಾರದಲ್ಲಿ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತೋಟದಲ್ಲಿ ವೇಷ ಮರೆಸಿ ಕೆಲಸ ಮಾಡುತ್ತಿದ್ದ ಅಲ್ತಾಫ್‍ನನ್ನು ನಿಖರ ಮಾಹಿತಿ ಆಧಾರದಲ್ಲಿ ಪೊಲೀಸರು ಬಂಧಿಸಿದ್ದು, ಇವರ ಕಾರ್ಯಾಚರಣೆಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

About sudina

Check Also

ಪತ್ನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಟೆಕ್ಕಿ 15 ವರ್ಷದ ಬಳಿಕ ಸೆರೆ…!

ಬೆಂಗಳೂರು : 2003ರಲ್ಲಿ ಗುಜರಾತ್‍ನಲ್ಲಿ ಪತ್ನಿಯನ್ನು ಕೊಂದು ಹೆಸರು ಬದಲಾಯಿಸಿಕೊಂಡು ಬೆಂಗಳೂರಿನ ಪ್ರತಿಷ್ಠಿತ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯನ್ನು …

Leave a Reply

Your email address will not be published. Required fields are marked *

error: Content is protected !!