Monday , September 24 2018
ಕೇಳ್ರಪ್ಪೋ ಕೇಳಿ
Home / News NOW / ನಾಳೆ ಎಲ್ಲಾ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ

ನಾಳೆ ಎಲ್ಲಾ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ

ಬೆಂಗಳೂರು : ಮಾಜಿ ಪ್ರಧಾನಿ, ದೇಶದ ಅಪ್ರತಿಮ ನಾಯಕ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ, ಏಳು ದಿನಗಳ ಕಾಲ ಶೋಕಾಚರಣೆಗೂ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಆದರೆ, ಪ್ರಸ್ತುತ ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಪ್ರೆವಾಹ ಪರಿಸ್ಥಿತಿ ಇರುವ ಕಾರಣ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಮತ್ತು ಪರಿಹಾರ ಒದಗಿಸುವ ಕಾರ್ಯಾಚರಣೆಯಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಉಳಿದವರಿಗೆ ಎಲ್ಲಾ ಈ ಆದೇಶ ಅನ್ವಯವಾಗಲಿದೆ. ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಗೌರವಾರ್ಥ ನಾಳೆ 17.08.2018ರ ಶುಕ್ರವಾರ ರಾಜ್ಯಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳು ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅನುದಾನ ಪಡೆಯುವ ಎಲ್ಲಾ ವಿದ್ಯಾಸಂಸ್ಥೆಗಳಿಗೂ ರಜೆ ನೀಡುವಂತೆ ಆದೇಶಿಸಲಾಗಿದೆ. ಇನ್ನು, ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳಿಗೂ ನಾಳೆ ರಜೆ ಇರಲಿದೆ. ಜೊತೆಗೆ, 16.08.2018 ರಿಂದ 22.08.2018ರ ವರೆಗೆ ಏಳು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆಗೂ ನಿರ್ಧರಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ನಡೆಸುವಂತಿಲ್ಲ. ಜೊತೆಗೆ, ಸದಾ ದಿನ ಧ್ವಜ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಸೂಚಿಸಲಾಗಿದೆ.

About sudina

Check Also

ಬಂಟ್ವಾಳ : ವಿವಿಧ ಸುದ್ದಿಗಳ ಒಂದು ನೋಟ

ಸೋಣ ಅಮಾವಾಸ್ಯೆ ತೀರ್ಥಸ್ನಾನ : ಭೂಲೋಕದ ಕೈಲಾಸವೆಂದೇ ಪ್ರಖ್ಯಾತವಾದ ನರಹರಿ ಪರ್ವತದಲ್ಲಿ ಸೆಪ್ಟೆಂಬರ್ 9ರ ಭಾನುವಾರ ಬೆಳಗ್ಗೆ 5 ಗಂಟೆಯಿಂದ …

Leave a Reply

Your email address will not be published. Required fields are marked *

error: Content is protected !!