Thursday , November 15 2018
ಕೇಳ್ರಪ್ಪೋ ಕೇಳಿ
Home / Film News / ಖ್ಯಾತ ನಟ ನಂದಮೂರಿ ಹರಿಕೃಷ್ಣ ದುರ್ಮರಣ

ಖ್ಯಾತ ನಟ ನಂದಮೂರಿ ಹರಿಕೃಷ್ಣ ದುರ್ಮರಣ

ಹೈದರಾಬಾದ್ : ತೆಲುಗು ಚಿತ್ರರಂಗದ ಖ್ಯಾತ ನಟ ಎನ್.ಟಿ.ರಾಮರಾವ್ ಅವರ ಪುತ್ರ ಹಿರಿಯ ನಟ ನಂದಮೂರಿ ಹರಿಕೃಷ್ಣ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಬುಧವಾರ ಮುಂಜಾನೆ ಈ ಘಟನೆ ನಡೆದಿದೆ. ನೆಲ್ಲೂರು ಜಿಲ್ಲೆಯ ಕಾವಲಿಗೆ ಅಭಿಮಾನಿಯ ಮದುವೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಲ್ಲೊಂಡ ಬಳಿಯ ಅನ್ನಪೆರ್ತಿಯಲ್ಲಿ ಈ ಅಘಘಾತ ಸಂಭವಿಸಿದೆ. ತಕ್ಷಣ ಹರಿಕೃಷ್ಣ ಅವರನ್ನು ಸ್ಥಳೀಯರ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇವರು ಕೊನೆಯುಸಿರೆಳೆದಿದ್ದಾರೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬಾಮೈದ ಆಗಿರುವ ನಂದಮೂರಿ ಹರಿಕೃಷ್ಣ ಹಲವಾರು ಪ್ರಮುಖ ಚಿತ್ರಗಳಲ್ಲಿ ನಟಿಸಿದ್ದರು. ಇನ್ನು, ಘಟನೆ ವೇಳೆ ಇವರೇ ಕಾರು ಚಲಾಯಿಸುತ್ತಿದ್ದು, ಅತೀ ವೇಗದ ಚಾಲನೆಯೇ ಅಪಘಾತದಕ್ಕೆ ಕಾರಣ ಎನ್ನಲಾಗುತ್ತಿದೆ. ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್‍ಗೆ ಡಿಕ್ಕಿಯಾಗಿ ಪಲ್ಡಿಯಾಗಿ ಈ ದುರ್ಘಟನೆ ಸಂಭವಿಸಿದ್ದು, ಇನ್ನಿಬ್ಬರಿಗೆ ಗಾಯಗಳಾಗಿದೆ.

ಹರಿಕೃಷ್ಣ ಅವರ ಮೊದಲ ಪತ್ನಿ ಜಾನಕಿ. ಇವರಿಗೆ ರಾಮ್, ಕಲ್ಯಾಣ್ ರಾಮ್ ಮತ್ತು ಸುಹಾಸಿನಿ ಎಂಬ ಮಕ್ಕಳಾಗಿದ್ದಾರೆ. ಇನ್ನು, ಇವರು ಎರಡನೇ ಮದುವೆಯಾಗಿದ್ದು ಅವರ ಪುತ್ರ ಟಾಲಿವುಡ್‍ನ ಸೂಪರ್ ಸ್ಟಾರ್ ಜೂನಿಯರ್ ಎನ್‍ಟಿಆರ್.

About sudina

Check Also

ಕಾಂಪ್ರಮೈಸ್ ಪ್ರಶ್ನೆಯೇ ಇಲ್ಲ : ಅರ್ಜುನ್ – ಕ್ಷಮೆ ಕೇಳೋಲ್ಲ : ಶ್ರುತಿ…

ಬೆಂಗಳೂರು : ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಮೀ ಟೂ ಬಿರುಗಾಳಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ …

Leave a Reply

Your email address will not be published. Required fields are marked *

error: Content is protected !!