ತಿರುವನಂತಪುರಂ : ತಮಿಳು, ಮಲಯಾಲಂನದಲ್ಲಿ ಖ್ಯಾತಿ ಗಳಿಸಿರುವ ನಟ ಜಯರಾಮ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಒಂದು ವೀಡಿಯೋವನ್ನು ಶೇರ್ ಮಾಡಿದ್ದಾರೆ. ಅದು ಗುಡ್ಡಗಾಡಿನ ಪ್ರದೇಶದಲ್ಲಿ ತಾನು ಚಲಾಯಿಸುತ್ತಿದ್ದ ಜೀಪ್ನ ದೃಶ್ಯ. ಮೊನ್ನೆಯಿಂದ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಲ್ಲಿ ಜಯರಾಮ್ ಅವರೂ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸುದ್ದಿಯಾಗಿತ್ತು..
ಹೀಗಾಗಿ, ಎಲ್ಲರೂ ಜಯರಾಮ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದರು. ಇದೀಗ, ಜಯರಾಮ್ ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದು, ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ. ಜೊತೆಗೆ, ಆರೋಗ್ಯ ವಿಚಾರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಈ ಅಪಘಾತದಲ್ಲಿ ಅಲ್ಲೇ ಇದ್ದ ಕೆಲವರು ಕೂದಳೆಲೆ ಅಂತರದಲ್ಲಿ ಪಾರಾಗಿದ್ದರು. ಜಯರಾಮ್ ಅವರ ನಿಯಂತ್ರಣ ತಪ್ಪಿ ಜೀಪ್ ಹಿಮ್ಮುಖವಾಗಿ ಚಲಿಸಿತ್ತು.
