Thursday , October 18 2018
ಕೇಳ್ರಪ್ಪೋ ಕೇಳಿ
Home / News NOW / ಸಚಿವ ಸ್ಥಾನಕ್ಕೆ ಎನ್.ಮಹೇಶ್ ದಿಢೀರ್ ರಾಜೀನಾಮೆ…!

ಸಚಿವ ಸ್ಥಾನಕ್ಕೆ ಎನ್.ಮಹೇಶ್ ದಿಢೀರ್ ರಾಜೀನಾಮೆ…!

ಬೆಂಗಳೂರು : ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್.ಮಹೇಶ್ ದಿಢೀರ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಬಿಎಸ್‍ಪಿ ಶಾಸಕರಾಗಿದ್ದ ಮಹೇಶ್ ಜೆಡಿಎಸ್ ಕಾಂಗ್ರೆಸ್ ದೋಸ್ತಿ ಸರ್ಕಾರದಲ್ಲಿ ಮಹತ್ವದ ಖಾತೆಯನ್ನೇ ನಿರ್ವಹಿಸುತ್ತಿದ್ದರು. ಆದರೆ, ಇದೀಗ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ಇವರು ಶಾಸಕನಾಗಿ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ, ಕುಮಾರಸ್ವಾಮಿ ಅವರಿಗೆ ಮುಂದೆಯೂ ನನ್ನ ಬೆಂಬಲ ಇದ್ದೇ ಇರುತ್ತದೆ ಎಂದು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಕ್ಕೆ ಮಹೇಶ್ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದ ಮಹೇಶ್ ರಾಜ್ಯದಲ್ಲಿ ಬಿಎಸ್‍ಪಿಯ ಖಾತೆ ತೆರೆಯಲು ಕಾರಣರಾಗಿದ್ದರು. ಇನ್ನೊಂದ್ಕಡೆ, ಸಚಿವ ಸ್ಥಾನ ತ್ಯಾಗದ ಹಿಂದೆ ಸಾಕಷ್ಟು ಅನುಮಾನಗಳು ಎದ್ದಿವೆ. ರಾಷ್ಟ್ರಮಟ್ಟದಲ್ಲಿ ಬಿಎಸ್‍ಪಿ ಕಾಂಗ್ರೆಸ್ ಜೊತೆಗಿನ ಮೈತ್ರಿ ಮುರಿದುಕೊಂಡಿದೆ. ಹೀಗಾಗಿ, ಕರ್ನಾಟಕದಲ್ಲಿ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್‍ನಿಂದ ದೂರವಾಗುವ ಹಿನ್ನೆಲೆಯಲ್ಲಿಯೇ ಬಿಎಸ್‍ಪಿ ವರಿಷ್ಠೆ ಮಾಯಾವತಿ ಈ ನಿರ್ಧಾರ ಕೈಗೊಂಡಿದ್ದಾರಾ ಎಂಬ ಚರ್ಚೆಯೂ ಶುರುವಾಗಿದೆ.

About sudina

Check Also

ಗುಂಡಿನ ದಾಳಿಗೆ ವ್ಯಕ್ತಿ ಬಲಿ : ರಾಜಕೀಯ ವೈಷಮ್ಯ ಶಂಕೆ

ಮಡಿಕೇರಿ : ಇಲ್ಲಿನ ಮರಗೋಡು ಗ್ರಾಮದಲ್ಲಿ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆದಿದೆ. ಈ ದಾಳಿಗೆ ಕಾನಡ್ಕ ತಿಲಕ್ ರಾಜ್(35) …

Leave a Reply

Your email address will not be published. Required fields are marked *

error: Content is protected !!