Tuesday , February 19 2019
ಕೇಳ್ರಪ್ಪೋ ಕೇಳಿ
Home / Film News / ಕಾಂಪ್ರಮೈಸ್ ಪ್ರಶ್ನೆಯೇ ಇಲ್ಲ : ಅರ್ಜುನ್ – ಕ್ಷಮೆ ಕೇಳೋಲ್ಲ : ಶ್ರುತಿ…

ಕಾಂಪ್ರಮೈಸ್ ಪ್ರಶ್ನೆಯೇ ಇಲ್ಲ : ಅರ್ಜುನ್ – ಕ್ಷಮೆ ಕೇಳೋಲ್ಲ : ಶ್ರುತಿ…

ಬೆಂಗಳೂರು : ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಮೀ ಟೂ ಬಿರುಗಾಳಿ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತು ಅವರ ವಿರುದ್ಧ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ನಡುವಣ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿದೆ. ಈ ನಡುವೆ, ಫಿಲಂ ಛೇಂಬರ್‍ನಲ್ಲಿ ಹಿರಿಯ ನಟ ಅಂಬರೀಷ್ ನೇತೃತ್ವದಲ್ಲಿ ನಡೆದ ಮಾತುಕತೆಯೂ ವಿಫಲವಾಗಿದ್ದು ಪ್ರಕರಣ ಕೋರ್ಟ್ ಕಟಕಟೆ ಏರಿದೆ..

ಫಿಲಂ ಛೇಂಬರ್‍ನಲ್ಲಿ ನಡೆದ ಮಾತುಕತೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡ ಅರ್ಜುನ್ ಸರ್ಜಾ, ನಾನು ಯಾವುದೇ ಕಾರಣಕ್ಕೂ ಕಾಂಪ್ರಮೈಸ್ ಆಗಲ್ಲ. ಈ ಘಟನೆಯಿಂದ ನನಗೆ ನೋವಾಗಿದ್ದು, ಕಾಂಪ್ರಮೈಸ್ ಎಂಬ ಪದ ಎದುರಾದರೆ ನಾನು ಅಪರಾಧ ಮಾಡಿದ್ದೇನೆ ಎಂದು ಬಿಂಬಿತವಾಗುತ್ತದೆ ಎಂದು ಹೇಳಿದ್ದಾರೆ. ಅರ್ಜುನ್ ಬಳಿಕ ಮಾತನಾಡಿದ ಶ್ರುತಿ ಹರಿಹರನ್, ನೋವು ಅನುಭವಿಸಿದವಳು ನಾನು. ಹೀಗಾಗಿ, ನಾನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ.

ಇದಕ್ಕೂ ಮೊದಲು ಮಾತನಾಡಿದ ಹಿರಿಯ ನಟ ಅಂಬರೀಷ್, ಇಬ್ಬರನ್ನೂ ಕರೆಸಿ ಮಾತನಾಡಿದ್ದೇವೆ. ಇಬ್ಬರಿಗೂ ತಿಳಿ ಹೇಳಿದ್ದೇವೆ. ನಾನೇನು ಸುಪ್ರೀಂಕೋರ್ಟ್ ಅಲ್ಲ. ಕೂಡಲೇ ಬಗೆಹರಿಯುವಂತಹ ಪ್ರಕರಣವೂ ಇದಲ್ಲ ಎಂದು ಹೇಳಿದ್ದಾರೆ.

ಇತ್ತ, ಅರ್ಜುನ್ ಸರ್ಜಾ ಕಡೆಯವರು ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದು, ಈ ದೂರು ಸೈಬರ್ ಕ್ರೈಂ ವಿಭಾಗಕ್ಕೆ ವರ್ಗಾವಣೆ ಆಗಿದೆ. ಅಲ್ಲಿ ಶ್ರುತಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಜೊತೆಗೆ, ಅರ್ಜುನ್ ಸರ್ಜಾ 5 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಇಂದು (ಶುಕ್ರವಾರ) ಈ ಬಗ್ಗೆ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಲಿದೆ.

About sudina

Check Also

ಹಿರಿಯ ನಟ ಲೋಕನಾಥ್ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ವಿಧಿವಶರಾಗಿದ್ದಾರೆ. ಅಂಕಲ್ ಲೋಕನಾಥ್ ಎಂದೇ ಖ್ಯಾತರಾಗಿದ್ದ ಲೋಕನಾಥ್ ವಯೋಸಹಜ ಅನಾರೋಗ್ಯದಿಂದ …

Leave a Reply

Your email address will not be published. Required fields are marked *

error: Content is protected !!