Tuesday , February 19 2019
ಕೇಳ್ರಪ್ಪೋ ಕೇಳಿ
Home / News NOW / ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ : 8 ಮಂದಿ ಸಾವು

ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ : 8 ಮಂದಿ ಸಾವು

ಬದೌನ್ : ದೀಪಾವಳಿ ಸನಿಹದಲ್ಲಿ ಇರುವಂತೆ ಉತ್ತರ ಪ್ರದೇಶದಲ್ಲಿ ದೊಡ್ಡ ಪಟಾಕಿ ದುರಂತ ಸಂಭವಿಸಿದೆ. ಇಲ್ಲಿನ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಟ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಆಗಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.

ಬದೌನ್‍ನಿಂದ ಸುಮಾರು ಆರು ಕಿಲೋ ಮೀಟರ್ ದೂರ ಇರುವ ರಸೂಲ್‍ಪುರದ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯವನ್ನು ಮಾಡಿತ್ತು. ಆದರೆ, ತುಂಬಾ ಸಮಯದ ತನಕ ಬೆಂಕಿ ನಿಯಂತ್ರಣಕ್ಕೆ ಬಂದೇ ಇರಲಿಲ್ಲ. ಈ ಘಟನೆಯಲ್ಲಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಓರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಗೊತ್ತಾಗಿದೆ. ಮೃತದಲ್ಲಿ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರೂ ಸೇರಿದ್ದಾರೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!